ಶನಿವಾರ, ಏಪ್ರಿಲ್ 18, 2026

ಬಳ್ಳಾರಿ: ಏ.21 ರಂದು ಪರಿಶಿಷ್ಟ ಪಂಗಡದವರ ಕುಂದು-ಕೊರತೆ ಸಭೆ

ಬಳ್ಳಾರಿ,ಏ.18(ಕರ್ನಾಟಕ ವಾರ್ತೆ): ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಸಮುದಾಯದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹಾಗೂ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಳ್ಳಲು ಏ.21 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಪರಿಶಿಷ್ಟ ಪಂಗಡ ಸಮುದಾಯದವರ ಕುಂದು-ಕೊರತೆ ಸಭೆ ಆಯೋಜಿಸಲಾಗಿಸಿದೆ. ಸಭೆಯಲ್ಲಿ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸಂಬAಧಿಸಿದ ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನ, ಸಮುದಾಯದ ಮುಖಂಡರು ಎದುರಿಸುತ್ತಿರುವ ಕುಂದು-ಕೊರತೆಗಳು ಹಾಗೂ ಅಭಿವೃದ್ಧಿ ಪೂರಕ ವಿಷಯಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗುವುದು. ಜಿಲ್ಲೆಯ ಪರಿಶಿಷ್ಟ ಪಂಗಡದ ಮುಖಂಡರು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ, ತಮ್ಮ ಸಲಹೆ ಹಾಗೂ ಸಮಸ್ಯೆಗಳನ್ನು ಹಂಚಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೊದ್ದೀನ್ ಅವರು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ