ಬುಧವಾರ, ಏಪ್ರಿಲ್ 22, 2026
ಏ.24 ರಂದು ಡಾ. ರಾಜ್‌ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
ಬಳ್ಳಾರಿ,ಏ.21(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಏ.24 ರಂದು ಸಂಜೆ 06 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಲೋಕಸಭೆ ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾರ್ಪೋರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ ಚಿದಾನಂದಪ್ಪ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿಯ ಆಕಾಶವಾಣಿ ಎಫ್‌ಎಂ ಕೇಂದ್ರದ ಉದ್ಘೋಷಕರಾದ ಬಸವರಾಜ ಅಮಾತಿ ಅವರು ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಕೊಪ್ಪಳದ ಕ್ಷಿತಿ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ.
*ಪುತ್ಥಳಿಗೆ ಮಾಲಾರ್ಪಣೆ:*
ಡಾ.ರಾಜ್‌ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ 09 ಗಂಟೆಗೆ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿನ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂ ರಾವ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ