ಬುಧವಾರ, ಏಪ್ರಿಲ್ 22, 2026

ಏ.24 ರಂದು ನೇರ ಸಂದರ್ಶನ

ಬಳ್ಳಾರಿ,ಏ.22(ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಎಪ್ಸಿಲಾನ್ ಕಾರ್ಬನ್ ಪ್ರೆöÊ.ಲಿ. ಮತ್ತು ಧ್ರುವ ಸೋಲಾರ್ ಪವರ್ ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ವಿದ್ಯಾರ್ಹತೆ: ಐಟಿಐ (ಫಿಟ್ಟರ್) ಅಥವಾ ಯಾವುದೇ ಪದವಿ ಪೂರ್ಣಗೊಳಿಸಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿ (ಬಯೋಡೇಟಾ) ಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ