ಶುಕ್ರವಾರ, ಏಪ್ರಿಲ್ 24, 2026
ಏ.26 ರಂದು ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2 ಕಾರ್ಯಕ್ರಮ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏ.26 ರಂದು ಬೆಳಿಗ್ಗೆ 10 ಗಂಟೆಗೆ ಸಂಡೂರು ತಾಲ್ಲೂಕಿನ ತಾಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2 ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಘನ ಉಪಸ್ಥಿತಿ ಇರುವರು.
ಸಂಡೂರು ವಿಧಾನಸಭೆ ಕ್ಷೇತ್ರದ ಶಾಸಕರಾದ ಈ.ಅನ್ನಪೂರ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಬಳ್ಳಾರಿ ಲೋಕಸಭೆ ಕ್ಷೇತ್ರದ ಸಂಸದ ಈ.ತುಕಾರಾಮ್, ರಾಜ್ಯಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಪರಿಷತ್ ಶಾಸಕರಾದ ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಷಯ ಲಾಡ್, ಸಂಡೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನೂರುದ್ದೀನ್.ಎಸ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್, ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಹೆಚ್.ಎನ್.ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಜಂಟಿ ಕಾರ್ಯದರ್ಶಿ ಹಾಗೂ ಜಂಟಿ ಕಾರ್ಮಿಕ ಆಯುಕ್ತ ಡಾ.ಎಸ್.ಬಿ. ರವಿಕುಮಾರ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿ ಡಿ.ಚನ್ನಣ್ಣನವರ್, ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಅ.ಶಿಂಧಿಹಟ್ಟಿ, ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ್ ನಾಯಕ್, ಸಂಡೂರು ತಹಶೀಲ್ದಾರ ಅನಿಲ್ ಕುಮಾರ್.ಜಿ, ಸಂಡೂರು ತಾಪಂ ಇಓ ಮಡಗಿನ ಬಸಪ್ಪ ಸೇರಿದಂತೆ ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿರುವರು ಎಂದು ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರು ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ