ಶುಕ್ರವಾರ, ಏಪ್ರಿಲ್ 24, 2026
ಮೇ 3ರಂದು ನೀಟ್ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಾಜ್ಞೆ ಜಾರಿ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಮೇ 3ರಂದು ನಡೆಯಲಿರುವ ರಾಷ್ಟಿçÃಯ ಅರ್ಹತಾ ಪ್ರವೇಶ ಪರೀಕ್ಷೆ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯ ಆವರಣವನ್ನು ನಿರ್ಬಂಧಿತ ಪ್ರವೇಶವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಾಗೇಂದ್ರ ಪ್ರಸಾದ್.ಕೆ ಅವರು ಘೋಷಿಸಿದ್ದಾರೆ.
ಮೇ 3ರಂದು (ಭಾನುವಾರ) ಮಧ್ಯಾಹ್ನ 02 ರಿಂದ ಸಂಜೆ 05 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶವನ್ನು ಹೊರಡಿಸಿದ್ದಾರೆ.
ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳು ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಆದೇಶಿಸಲಾಗಿದೆ.
ಅನಧಿಕೃತ ವ್ಯಕ್ತಿಗಳು ಅಥವಾ ಗುಂಪುಗಳು ಪರೀಕ್ಷಾ ಕೇಂದ್ರದ ಆವರಣದೊಳಗೆ ಪ್ರವೇಶಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಮೇಲಿನ ಯಾವುದೇ ನಿರ್ಬಂಧಗಳು ಪರೀಕ್ಷಾ ಮೇಲ್ವಿಚಾರಣೆ ಮತ್ತು ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪರೀಕ್ಷಾ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ