ಗುರುವಾರ, ಏಪ್ರಿಲ್ 16, 2026
ಬಳ್ಳಾರಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ಯಶಸ್ವಿ
ಬಳ್ಳಾರಿ,ಏ.14(ಕರ್ನಾಟಕ ವಾರ್ತೆ):
ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು (ಆಂಗ್ಲ ಮಾಧ್ಯಮ) ಮತ್ತು ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಗಳ 2026-27ನೇ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶಕ್ಕಾಗಿ ಹಮ್ಮಿಕೊಳ್ಳಲಾಗಿದ್ದ ಪ್ರವೇಶ ಪರೀಕ್ಷೆಯು ಯಶಸ್ವಿಯಾಗಿ ಜರುಗಿದೆ.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ಏ.12 ರಂದು ಪ್ರವೇಶಾತಿ ಪರೀಕ್ಷೆ ನಡೆಸಲಾಯಿತು.
2,670 ಒಟ್ಟು ಸಲ್ಲಿಕೆಯಾದ ಅರ್ಜಿಗಳು, 1,728 ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು, 942 ಗೈರುಹಾಜರಾದ ವಿದ್ಯಾರ್ಥಿಗಳು, ಶೇ.64.72 ರಷ್ಟು ಒಟ್ಟು ಹಾಜರಾತಿ ಪ್ರಮಾಣ ದಾಖಲಾಗಿದೆ.
ಈ ಬಾರಿಯ ಪ್ರವೇಶ ಪರೀಕ್ಷೆಗೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪರೀಕ್ಷೆಯು ಯಾವುದೇ ಅಡೆತಡೆಯಿಲ್ಲದೆ ಶಾಂತಿಯುತವಾಗಿ ನಡೆದಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ