ಮಂಗಳವಾರ, ಏಪ್ರಿಲ್ 21, 2026
ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ: ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಬಳ್ಳಾರಿ,ಏ.21(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
5ನೇ ತರಗತಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯ ಮೂಲಕ ಈ ಪ್ರವೇಶ ಪಡೆಯಲು ಅವಕಾಶವಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಮೇ 04 ಕೊನೆಯ ದಿನವಾಗಿರುತ್ತದೆ. ಮೇ 12 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ (https://swd.karnataka.gov.in) ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಪ್ರವೇಶಾತಿ ಅರ್ಜಿಗಳನ್ನು ಸಲ್ಲಿಸಬಹುದು.
ಪ್ರವೇಶಾತಿ ಪ್ರಕ್ರಿಯೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಮೊ.9480843023 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ