ಸೋಮವಾರ, ಏಪ್ರಿಲ್ 13, 2026
ಅಲ್ಲೀಪುರದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಬಾಲಕಿಯರ ವಸತಿ ಕಾಲೇಜಿಗೆ ಶೇ.99 ಫಲಿತಾಂಶ: ವಿದ್ಯಾರ್ಥಿನಿಯರ ಅಮೋಘ ಸಾಧನೆ
ಬಳ್ಳಾರಿ,ಏ.13(ಕರ್ನಾಟಕ ವಾರ್ತೆ):
ನಗರದ ಹೊರವಲಯದ ಅಲ್ಲೀಪುರದಲ್ಲಿರುವ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.99 ರಷ್ಟು ಅತ್ಯುತ್ತಮ ಗುಣಾತ್ಮಕ ಫಲಿತಾಂಶ ದಾಖಲಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.
*ಫಲಿತಾಂಶದ ವಿವರ:*
ಕಾಲೇಜಿನ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿಂದ ಒಟ್ಟು 108 ವಿದ್ಯಾರ್ಥಿನಿಯರು ಪರೀಕ್ಷೆಗೆ ನೋಂದಾಯಿಸಿಕೊAಡಿದ್ದರು. ಇವರಲ್ಲಿ 107 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.
ಉತ್ತೀರ್ಣರಾದವರಲ್ಲಿ 57 ವಿದ್ಯಾರ್ಥಿನಿಯರು ಅತ್ಯುತ್ತಮ ದರ್ಜೆ, 47 ವಿದ್ಯಾರ್ಥಿನಿಯರು ಉತ್ತಮ ದರ್ಜೆ ಹಾಗೂ ಇಬ್ಬರು ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ.
*ವಿಜ್ಞಾನ ವಿಭಾಗದಲ್ಲಿ ಶೇ.100 ಸಾಧನೆ:*
ವಿಜ್ಞಾನ ವಿಭಾಗದ ಒಟ್ಟು 56 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗುವ ಮೂಲಕ ಶೇ.100 ರಷ್ಟು ಫಲಿತಾಂಶ ತಂದಿದ್ದಾರೆ. ಈ ವಿಭಾಗದಲ್ಲಿ 36 ವಿದ್ಯಾರ್ಥಿನಿಯರು ಅತ್ಯುತ್ತಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ.
*ವಿಜ್ಞಾನ ವಿಭಾಗದ ಟಾಪರ್ಸ್:*
ದಾನೇಶ್ವರಿ (ಶೇ.97.33), ಫ್ರೀದೋಷ್.ಬಿ (ಶೇ.96.50), ಕೆ.ಎಂ.ಚAದನ (ಶೇ.96.16), ಸವಿತಾ (ಶೇ.96.16), ಸಂಗೀತ (ಶೇ.95.66) ಮತ್ತು ಕೆ.ಪೂರ್ಣಿಮಾ (ಶೇ.95.33) ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರು.
*ವಾಣಿಜ್ಯ ವಿಭಾಗ:*
ವಾಣಿಜ್ಯ ವಿಭಾಗದಲ್ಲಿ 52 ವಿದ್ಯಾರ್ಥಿನಿಯರು ಪರೀಕ್ಷೆ ಎದುರಿಸಿದ್ದು, ಇವರಲ್ಲಿ 21 ವಿದ್ಯಾರ್ಥಿನಿಯರು ಅತ್ಯುತ್ತಮ ದರ್ಜೆ ಹಾಗೂ 28 ವಿದ್ಯಾರ್ಥಿನಿಯರು ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ವಿಭಾಗದಲ್ಲಿ ಕಾಲೇಜು ಶೇ.98 ರಷ್ಟು ಫಲಿತಾಂಶ ಪಡೆದಿದೆ.
*ವಾಣಿಜ್ಯ ವಿಭಾಗದ ಟಾಪರ್ಸ್:*
ಪವಿತ್ರಾ (ಶೇ.96), ಲೀಲಾವತಿ.ಎಂ. (ಶೇ.95.83), ಸಿಂಚನ (ಶೇ.95.50), ರೋಷನ್.ಬಿ(ಶೇ.93.83) ಮತ್ತು ಎಂ.ಸಹನಾ (ಶೇ.93.50) ವಿಭಾಗಕ್ಕೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿಯರ ಈ ಅಮೋಘ ಸಾಧನೆಗೆ ಬೆಂಗಳೂರಿನ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು, ಬಳ್ಳಾರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾಲೇಜಿನ ಪ್ರಾಂಶುಪಾಲರಾದ ನಾಗಯ್ಯ ಹಿರೇಮಠ ಅವರು ಸಾಧಕ ವಿದ್ಯಾರ್ಥಿನಿಯರಿಗೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)











ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ