ಗುರುವಾರ, ಏಪ್ರಿಲ್ 16, 2026
ಸ್ವಯA ಗಣತಿ ಪೂರ್ಣಗೊಳಿಸಿದ ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ,ಏ.16(ಕರ್ನಾಟಕ ವಾರ್ತೆ):
ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ‘ಜನಗಣತಿ 2027' ಅಂಗವಾಗಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಬುಧವಾರ ತಮ್ಮ ನಿವಾಸದಲ್ಲಿ ಸ್ವಯಂ ಗಣತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ತಮ್ಮ ಕುಟುಂಬದ ವಿವರಗಳನ್ನು ಆನ್‌ಲೈನ್ ಪೋರ್ಟಲ್ ಮೂಲಕ ದಾಖಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿ ಯೋಜನೆಗಳ ರೂಪಿಸುವಿಕೆಯಲ್ಲಿ ಜನಗಣತಿಯು ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ನಾಗರಿಕನು ನಿಖರವಾದ ಮಾಹಿತಿಯನ್ನು ನೀಡುವುದು ಸರ್ಕಾರದ ಕರ್ತವ್ಯಕ್ಕೆ ಸಹಕಾರಿಯಾದಂತೆ ಎಂದು ತಿಳಿಸಿದರು.
ಈ ಗಣತಿಯ ದತ್ತಾಂಶವು ಮುಂದಿನ ದಿನಗಳಲ್ಲಿ ಕ್ಷೇತ್ರದ ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ದಾರಿದೀಪವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಳ್ಳಾರಿ ನಗರದ ಪ್ರತಿಯೊಂದು ಕುಟುಂಬವೂ ಜನಗಣತಿ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಗಣತಿದಾರರಿಗೆ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಅವರು ವಿನಂತಿಸಿದರು.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ