ಶನಿವಾರ, ಏಪ್ರಿಲ್ 4, 2026
ವೃದ್ಧ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಏ.04(ಕರ್ನಾಟಕ ವಾರ್ತೆ):
ಸಿರುಗುಪ್ಪ ತಾಲ್ಲೂಕಿನ ಕೆಕೆ ಹಾಳ್ ಗ್ರಾಮದ ನಿವಾಸಿ ಪರಮೇಶ ಶೆಟ್ಟಿ ಎನ್ನುವ 68 ವರ್ಷದ ವೃದ್ಧ ಮಾ.30 ರಂದು ಮನೆಯಿಂದ ಹೊರ ಹೋಗಿ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಹಚ್ಚೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ವೃದ್ಧನ ಚಹರೆ: ಎತ್ತರ 5 ಅಡಿ, ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕಪ್ಪು-ಬಿಳಿ ಕೂದಲು, ಅರ್ಧ ಬೋಳು ತಲೆ ಹೊಂದಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅಂಗಿ, ಬಿಳಿ ಪಂಚೆ ಧರಿಸಿರುತ್ತಾನೆ.
ಕಾಣೆಯಾದ ವೃದ್ಧನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹಚ್ಚೊಳ್ಳಿ ಪೊಲೀಸ್ ಠಾಣೆಯ ಮೊ.9480803054, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ