ಶುಕ್ರವಾರ, ಏಪ್ರಿಲ್ 24, 2026
ಯುವಕ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಏ.23(ಕರ್ನಾಟಕ ವಾರ್ತೆ):
ಬಳ್ಳಾರಿ ತಾಲ್ಲೂಕಿನ ಶಂಕರಬAಡೆ ಗ್ರಾಮದ ರೂಪನಗುಡಿ ರಸ್ತೆಯ ಈಶ್ವರ ಗುಡಿ ಹತ್ತಿರದ 1ನೇ ವಾರ್ಡ್ನ ಹುಬ್ಬಳ್ಳಿ ನಾಗನಗೌಡ ಎನ್ನುವ 28 ವರ್ಷದ ಯುವಕ ಏ.20 ರಂದು ಸ್ನೇಹಿತನ ಮದುವೆಗೆ ಹೋಗಿ ಬರುವುದಾಗಿ ಹೇಳಿ ಮರಳಿ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ಸ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ ಗುರುತು: ಎತ್ತರ 5.8 ಅಡಿ, ಕೋಲು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು, ಕಪ್ಪು ಕೂದಲು ಹೊಂದಿದ್ದು, ಬಲಗೈ ಗೆ ಶಿವನ ಅಚ್ಛೆ ಹಾಕಿಸಿಕೊಂಡಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಅರ್ಧ ತೋಳಿನ ನೀಲಿ ಬಣ್ಣದ ಅಂಗಿ, ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ಯುವಕನ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ