ಮಂಗಳವಾರ, ಏಪ್ರಿಲ್ 7, 2026

ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಏ.07(ಕರ್ನಾಟಕ ವಾರ್ತೆ): ತಾಲ್ಲೂಕಿನ ಕೊಳಗಲ್ಲು ಗ್ರಾಮದ ರ‍್ರಿತಾತ ದೇವಸ್ಥಾನ ಹತ್ತಿರದ 3 ನೇ ವಾರ್ಡ್ನ ನಿವಾಸಿಯಾದ ಶಂಕ್ರಪ್ಪ ಎನ್ನುವ 37 ವರ್ಷದ ವ್ಯಕ್ತಿ ಫೆ.24 ರಂದು ಮನೆಯಿಂದ ಹೊರ ಹೋಗಿ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪಕ್ಟರ್ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ 5.1 ಅಡಿ, ಕೋಲು ಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಕಪ್ಪು ಕೂದಲು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ತುಂಬು ತೋಳಿನ ಬಿಳಿ, ಕಂದು ಬಣ್ಣದ ಚೆಕ್ಸ್ ಇರುವ ಗೋಧಿ ಬಣ್ಣದ ಅಂಗಿ ಹಾಗೂ ಕಂದು ಬಣ್ಣದ ಲುಂಗಿ ಧರಿಸಿರುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ, ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ