ಸೋಮವಾರ, ಏಪ್ರಿಲ್ 13, 2026

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಏ.13(ಕರ್ನಾಟಕ ವಾರ್ತೆ): ನಗರದ ಕೌಲ್ ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯ ಬಿಎಂಸಿಆರ್‌ಸಿ ಆಸ್ಪತ್ರೆಯ ಸ್ತಿçà ರೋಗ ಮತ್ತು ಪ್ರಸೂತಿ ವಿಭಾಗದ ವಾರ್ಡ್ ಹತ್ತಿರ ಸುಮಾರು 45 ವರ್ಷದ ಅನಾಮಧೇಯ ವ್ಯಕ್ತಿಯು ಮಲಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.8 ಅಡಿ, ಕೋಲುಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಕಪ್ಪು-ಬಿಳಿ ಕೂದಲು, ಕುರುಚಲು ಗಡ್ಡ ಬಿಟ್ಟಿರುತ್ತಾನೆ. ಹಸಿರು ಬಣ್ಣದ ತುಂಬು ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ಪಿಐ ಮೊ.9480803047, ಪಿಎಸ್‌ಐ ಮೊ.9480803084, ದೂ.08392-240731 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ