ಗುರುವಾರ, ಏಪ್ರಿಲ್ 16, 2026
ಬಳ್ಳಾರಿ: ಇ-ಸೇವಾ ವಲಯಗಳ ಆಡಳಿತ ಮಂಡಳಿಯವರೊAದಿಗೆ ಸಭೆ ನಡೆಸಿ | ಎಸ್‌ಪಿ ಡಾ.ಸುಮನ್ ಡಿ.ಪೆನ್ನೇಕರ್ ಹೇಳಿಕೆ ಸಿಬ್ಬಂದಿ ಮಾಹಿತಿ ಸಲ್ಲಿಸುವುದು ಕಡ್ಡಾಯ
ಬಳ್ಳಾರಿ,ಏ.16(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಿಗ್ಗಿ, ಜೊಮ್ಯಾಟೊ, ಅಮೆಜಾನ್, ಬ್ಲಿಂಕಿಟ್ ಸೇರಿದಂತೆ ವಿವಿಧ ಸಂಸ್ಥೆಗಳು ಮತ್ತು ಖಾಸಗಿ ಸಾರಿಗೆ ಸಂಸ್ಥೆಗಳು ತಮ್ಮಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಸಿಬ್ಬಂದಿಯ ಪೂರ್ಣ ವಿವರಗಳನ್ನು ಹತ್ತಿರದ ಪೊಲೀಸ್ ಠಾಣೆಗೆ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ಹೇಳಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡೆಲಿವರಿ ಸಮಯದಲ್ಲಿ ಮಾದಕ ವಸ್ತು ಸೇರಿದಂತೆ ಇನ್ನಿತರ ನಿಷೇಧಿತ ವಸ್ತುಗಳನ್ನು ಸಾಗಟ ಮಾಡುವುದನ್ನು ತಡೆಯಲು ಹಾಗೂ ಪ್ರತಿನಿತ್ಯದ ಚಟವಟಿಕೆಗಳ ಮೇಲೆ ನಿಗಾವಣೆ ಇಡಲು, ಗ್ರಾಹಕರ ಹಿತದೃಷ್ಟಿಯಿಂದ ವಿವಿಧ ಇ-ಸೇವಾ ವಲಯಗಳ ಮುಖ್ಯಸ್ಥರೊಂದಿಗೆ ಬುಧವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಂಚೆ ಇಲಾಖೆ, ರೈಲ್ವೆ ಪೊಲೀಸ್, ಇ-ಕಾಮರ್ಸ್ ಸಂಸ್ಥೆಗಳು, ಆಹಾರ ವಿತರಣಾ ಸಂಸ್ಥೆಗಳು ಮತ್ತು ಖಾಸಗಿ ಟ್ರಾವೆಲ್ಸ್ ಏಜೆನ್ಸಿಗಳು ತಮ್ಮ ಸಿಬ್ಬಂದಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ತಿಳಿಸಿದರು.
ತಮ್ಮ ಪ್ರತಿಯೊಬ್ಬ ಸಿಬ್ಬಂದಿಯೂ ತಮ್ಮ ಆಧಾರ್ ಕಾರ್ಡ್ ಅಥವಾ ಅಧಿಕೃತ ಗುರುತಿನ ಚೀಟಿಯನ್ನು ಹೊಂದಿರಬೇಕು. ಹೊಸದಾಗಿ ಕೆಲಸಕ್ಕೆ ಸೇರುವ ಮತ್ತು ಈಗಾಗಲೇ ಕೆಲಸದಲ್ಲಿರುವ ಸಿಬ್ಬಂದಿಗಳು ಕಡ್ಡಾಯವಾಗಿ ಪೊಲೀಸ್ ಪರಿಶೀಲನಾ ಪ್ರಮಾಣಪತ್ರವನ್ನು ಹೊಂದಿರಬೇಕು. ಕಂಪನಿಗಳು ತಮ್ಮಲ್ಲಿ ಕೆಲಸ ಮಾಡುವ ಸಿಬ್ಬಂದಿ ಬಿಟ್ಟು ಹೋದರೆ ಅಥವಾ ಹೊಸದಾಗಿ ಸೇರಿದ ಸಿಬ್ಬಂದಿಯ ಮಾಹಿತಿ ಸಂಬAಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.
ಮುಖ್ಯವಾಗಿ ಡೆಲಿವರಿ ಬಾಯ್ಸ್ ಮತ್ತು ಚಾಲಕರು ಸಂಚಾರ ನಿಯಮಗಳನ್ನು ಉಲ್ಲಂಘಿಸದAತೆ ಸಂಸ್ಥೆಗಳು ಎಚ್ಚರಿಕೆ ವಹಿಸಬೇಕು. ನಿಯಮಗಳನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ವಸ್ತುಗಳ ದಾಸ್ತಾನು ಹಾಗೂ ಪ್ಯಾಕಿಂಗ್ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಬುಕ್ಕಿಂಗ್ ರಿಜಿಸ್ಟರ್ ನಿರ್ವಹಣೆ, ಸಂಸ್ಥೆಗಳು ಕಡ್ಡಾಯವಾಗಿ ಲೈಸೆನ್ಸ್ ಹೊಂದಿರಬೇಕು, ಡೆಲಿವರಿ ಬಾಯ್ಸ್ ಗಳ ನೊಂದಣಿ ಕಡ್ಡಾಯ, ವಾಹನ ಚಾಲನಾ ಲೈಸನ್ಸ್ ಹೊಂದಿದ ಡೆಲಿವರಿ ಬಾಯ್ಸ್ ಗಳನ್ನು ಮಾತ್ರ ನೇಮಕ ಮಾಡಿಕೊಳ್ಳಲು, ಡೆಲಿವರಿ ಬಾಯ್ಸ್ ಗಳ ಆಧಾರ್ ಕಾರ್ಡ, ಪಾನ್ ಕಾರ್ಡಗಳನ್ನು ಸಂಸ್ಥೆಗಳ ಆಡಳಿತ ಮಂಡಳಿಯವರು ನೇಮಕಾತಿ ಪೂರ್ವದಲ್ಲಿ ಕಡ್ಡಾಯವಾಗಿ ಪಡೆಯಬೇಕು. ಡೆಲಿವರಿ ಬಾಯ್ಸ್ ಹಾಗೂ ಕಚೇರಿ ಸಿಬ್ಬಂದಿಯವರ ಸಮಗ್ರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾ ಪೊಲೀಸ್ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಿದರು.
ಕೆಲವು ಡೆಲಿವರಿ ಸಂದರ್ಭದಲ್ಲಿ ಗ್ರಾಹಕರಿಗೆ ಆರ್ಡರ್ ಮಾಡಿದ ವಸ್ತುಗಳ ತಲುಪಿಸುವ ಜೊತೆಯಲ್ಲಿಯೇ ಇನ್ನಿತರ ವಸ್ತುಗಳನ್ನು (ಮಾದಕ) ತಲುಪಿಸುತ್ತಿರುವ ಬಗ್ಗೆ ಮಾಹಿತಿ ಇದ್ದು, ಹೀಗಾಗಿ ವಿಳಂಬವಾಗಿ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸುವ ಡೆಲಿವರಿ ಬಾಯ್ಸ್ ಗಳ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾ ಪೊಲೀಸ್ ಕಚೇರಿಗೆ ಸಲ್ಲಿಸಬೇಕು. ಡೆಲಿವರಿ ಪಾರ್ಸಲ್ ಗಳನ್ನು ಗ್ರಾಹಕರಿಗೆ ತಲುಪಿಸುವ ಸಮಯದಲ್ಲಿ, ವಸ್ತುಗಳ ಬಗ್ಗೆ ಅನುಮಾನ ಕಂಡು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.
ಪೋಸ್ಟಲ್ ಇಲಾಖೆ, ಡೊಮಿನೋಸ್, ಕೆಎಫ್‌ಸಿ, ಡಿಟಿಡಿಸಿ ಕೊರಿಯರ್, ಟ್ರಾವೆಲ್ಸ್ ಏಜೆನ್ಸಿಗಳು ಸೇರಿದಂತೆ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಸೇವಾ ಸಂಸ್ಥೆಗಳು ಈ ಸುರಕ್ಷತಾ ಕ್ರಮಗಳಿಗೆ ಸಹಕರಿಸಬೇಕು ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್.ಎಸ್, ಬಳ್ಳಾರಿ ನಗರ ಉಪವಿಭಾಗದ ಡಿಎಸ್‌ಪಿ ಎಂ.ಗೋವಿAದ್ ರಾಜ್ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳ ಪೊಲೀಸ್ ಇನ್ಸ್ ಪೆಕ್ಟರ್ಸ್ ಹಾಗೂ ಇತರರು ಹಾಜರಿದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ