ಗುರುವಾರ, ಏಪ್ರಿಲ್ 2, 2026

ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಏ.02(ಕರ್ನಾಟಕ ವಾರ್ತೆ): ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಪೇಟೆ ರೈಲ್ವೇ ನಿಲ್ದಾಣದ ವೇದಿಕೆ ನಂ.01 ರ ಎಫ್‌ಓಬಿ ಕೆಳಗಡೆ ರೈಲ್ವೇ ಕಿ.ಮೀ. ನಂ.143/100 ರಲ್ಲಿ ಅಂದಾಜು 60 ವರ್ಷದ ವ್ಯಕ್ತಿಯು ಚಲಿಸುವ ಯಾವುದೋ ರೈಲು ಗಾಡಿಗೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಈ ಕುರಿತು ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪಿಎಸ್‌ಐ ಮನವಿ ಮಾಡಿದ್ದಾರೆ. ಚಹರೆ ಗುರುತು: ಸುಮಾರು 5.5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಸುಮಾರು 1 ಇಂಚು ಬಿಳಿಯ ಕೂದಲು, ಬಿಳಿಯ ಗಡ್ಡ ಮತ್ತು ಮೀಸೆ ಬಿಟ್ಟಿರುತ್ತಾನೆ. ಮೃತನ ಮೈಮೇಲೆ ತಿಳಿ ನೀಲಿ ಬಣ್ಣದ ತುಂಬು ತೋಳಿನ ಅಂಗಿ, ನೀಲಿ ಬಣ್ಣದ ಫುಲ್ ಬನಿಯನ್, ಬಿಳಿ ಮಿಶ್ರಿತ ಪಂಚೆ, ತಿಳಿ ಬೂದು ಬಣ್ಣದ ಒಳ ಉಡುಪು ಧರಿಸಿರುತ್ತಾನೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯ ದೂ.08392-276063 ಅಥವಾ ರೈಲ್ವೇ ಪೊಲೀಸ್ ಕಂಟ್ರೋಲ್ ರೂಂ ದೂ.080-22871291 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ