ಬುಧವಾರ, ಏಪ್ರಿಲ್ 22, 2026
ಬಳ್ಳಾರಿ: ಸರ್ಕಾರಿ ಜಮೀನು ಒತ್ತುವರಿ ವಿರುದ್ಧ ಜಿಲ್ಲಾಡಳಿತ ಸಮರ | ಅಂದ್ರಾಳ್ ಬೈಪಾಸ್ ಬಳಿ ತೆರವು ಕಾರ್ಯಾಚರಣೆ
ಬಳ್ಳಾರಿ,ಏ.22(ಕರ್ನಾಟಕ ವಾರ್ತೆ):
ಜಿಲ್ಲಾಡಳಿತವು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಬುಧವಾರ ಅಂದ್ರಾಳ್ ಬೈಪಾಸ್ ರಸ್ತೆಯ ಸಮೀಪ ಕಾರ್ಯಾಚರಣೆ ನಡೆಸಿತು.
ಅಂದ್ರಾಳ್ ಗ್ರಾಮದ ಸರ್ವೇ ನಂಬರ್ ಒಂದರಲ್ಲಿ ಸುಮಾರು 3 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ಇಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಸಿಮೆಂಟ್ ಕಟ್ಟಡಗಳು ಮತ್ತು ಇತರ ನಿರ್ಮಾಣಗಳನ್ನು ಜಿಲ್ಲಾಡಳಿತವು ಜೆಸಿಬಿ ಯಂತ್ರಗಳ ಸಹಾಯದಿಂದ ತೆರವುಗೊಳಿಸಿದೆ.
ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಅವರು ಮಾತನಾಡಿ, ಜಿಲ್ಲಾಡಳಿತದ ಈ ದಿಟ್ಟ ಕ್ರಮವು ಸರ್ಕಾರಿ ಆಸ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿದ್ದು, ಈ ಒತ್ತುವರಿಯ ಹಿಂದೆ ಯಾರೇ ಇದ್ದರೂ ಮತ್ತು ಯಾರು ಪ್ರಚೋದನೆ ನೀಡುತ್ತಿದ್ದರೂ ಅವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಡಿಡಿಎಲ್‌ಆರ್ ಪ್ರಮೋದ್ ಸೇರಿದಂತೆ ಬಳ್ಳಾರಿ ತಾಲ್ಲೂಕು ತಹಸೀಲ್ದಾರ ಕಚೇರಿಯ ಅಧಿಕಾರಿ- ಸಿಬ್ಬಂದಿ ಹಾಗೂ ಮತ್ತೀತರರು ಇದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ