ಗುರುವಾರ, ಏಪ್ರಿಲ್ 2, 2026

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಬಳ್ಳಾರಿ,ಏ.02(ಕನಾಟಕ ವಾರ್ತೆ): ನಗರದ ಬ್ರೂಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಮೇಶ್ ಎನ್ನುವ 57 ವರ್ಷದ ವ್ಯಕ್ತಿ ಮಾ.30 ರಂದು ಮನೆಯಿಂದ ಹೊರ ಹೋಗಿ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ: ಅಂದಾಜು ಎತ್ತರ 5.5 ಅಡಿ, ಕೋಲು ಮುಖ, ಸಾಧಾರಣ ಮೈಕಟ್ಟು, ಬಿಳಿ ಕೂದಲು ಹೊಂದಿದ್ದು, ಬಲಗೈ ಮೇಲೆ ಆಂಜಿನೇಯನ ಹಚ್ಚೆ ಹಾಕಿಸಿಕೊಂಡಿರುತ್ತಾನೆ. ವ್ಯಕ್ತಿಯು ನಿಧಾನವಾಗಿ ಕುಂಟುತ್ತಾ ನಡೆಯುತ್ತಾನೆ. ಮನೆಯಿಂದ ಹೊರಡುವಾಗ ಬಿಳಿ ಬಣ್ಣದ ಅಂಗಿ ಹಾಗೂ ಗ್ರೇ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ತಮಿಳು ಭಾಷೆ ಮಾತನಾಡುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ