ಶುಕ್ರವಾರ, ಏಪ್ರಿಲ್ 10, 2026
ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
ಬಳ್ಳಾರಿ,ಏ.10(ಕರ್ನಾಟಕ ವಾರ್ತೆ):
ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಓದಲು ಇಚ್ಛಿಸುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಏಪ್ರಿಲ್ 15 ರಿಂದ ಅರ್ಜಿ ವಿತರಿಸಲಾಗುತ್ತದೆ. ಮೇ 04 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಯಾ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ದಿನಾಂಕದೊಳಗೆ ಅದೇ ಕಚೇರಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಆಯಾ ತಾಲ್ಲೂಕು ಕಚೇರಿ, ಇಲ್ಲವೇ ದೂ.08392-242453 ಅಥವಾ ಮೊ.9986302091 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದ್ದಿನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ