ಶುಕ್ರವಾರ, ಏಪ್ರಿಲ್ 24, 2026
ಬಳ್ಳಾರಿ ಮಹಾನಗರ ಪಾಲಿಕೆ: ಶುಲ್ಕ ವಸೂಲಾತಿಗೆ ಸ್ವ-ಸಹಾಯ ಸಂಘಗಳಿAದ ಅರ್ಜಿ ಆಹ್ವಾನ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಕೇಂದ್ರ ಪುರಸ್ಕೃತ ಯೋಜನೆಯಾದ ಅಮೃತ್ 2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮದ ತಾಂತ್ರಿಕೇತರ ಚಟುವಟಿಕೆ (ನಾನ್ ಟೆಕ್ನಿಂಕಲ್) ಕಾರ್ಯಕ್ರಮದಡಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಬಹುದಿನಗಳಿಂದ ಬಾಕಿ ಇರುವ ಆಸ್ತಿ ತೆರಿಗೆ ಮತ್ತು ನೀರಿನ ತೆರಿಗೆ ಮೊತ್ತವನ್ನು ಡೇ-ನಲ್ಮ್ ಯೋಜನೆಯಡಿ ರಚಿತವಾದ ಸ್ವಸಹಾಯ ಸಂಘಗಳಿAದ ವಸೂಲಾತಿ ಮಾಡಲು ಅರ್ಹ ಸ್ವಸಹಾಯ ಸಂಘಗಳಿAದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸ್ವಸಹಾಯ ಸಂಘಗಳು ಮೇ 06 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿಯನ್ನು ಡೇ-ನಲ್ಮ್ ಶಾಖೆಯಿಂದ ಪಡೆದುಕೊಂಡು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.
*ಅರ್ಹತೆ:*
ಸ್ವಸಹಾಯ ಸಂಘವು ಡೇ-ನಲ್ಮ್ ಅಭಿಯಾನದಡಿ ನೋಂದಾಯಿಸಿರಬೇಕು ಹಾಗೂ ಪಂಚಸೂತ್ರಗಳನ್ನು ಅನುಸರಿಸುತ್ತಿರಬೇಕು. (ನಿರಂತರ ಸಭೆ, ನಿರಂತರ ಉಳಿತಾಯ, ಆಂತರಿಕ ಸಾಲ ವಿತರಣೆ, ನಿಯಮಿತ ಸಾಲ ಮರುಪಾವತಿ ಮತ್ತು ದಾಖಲಾತಿ ನಿರ್ವಹಣೆ).
ಆಸಕ್ತಿಯುಳ್ಳ ಸ್ವಸಹಾಯ ಸಂಘದ ಸದಸ್ಯರು ಕನಿಷ್ಠ 7ನೇ ತರಗತಿಯವರೆಗೆ ಶಿಕ್ಷಣ ಹೊಂದಿರಬೇಕು ಹಾಗೂ ಎಲೆಕ್ಟಾçನಿಕ್ ಪರಿಕರಗಳನ್ನು ಬಳಸುವ ಸಾಮರ್ಥ್ಯ ಹೊಂದಿರಬೇಕು. ಸ್ವಸಹಾಯ ಸಂಘದ ಹೆಸರಿನಲ್ಲಿ ಸಕ್ರಿಯ ಬ್ಯಾಂಕ್ ಖಾತೆ ಹೊಂದಿರಬೇಕು.
ಬ್ಯಾAಕಿನ ಮೂಲಕ ಅಥವಾ ಆಂತರಿಕ ಸಾಲ ಪಡೆದು ನಿಯಮಿತವಾಗಿ ಸಾಲ ಮರುಪಾವತಿ ಮಾಡಿರಬೇಕು. ಸ್ವಸಹಾಯ ಗುಂಪು ಡೇ-ನಲ್ಮ್ ಅಭಿಯಾನದಡಿ ನೋಂದಾಯಿಸಿಕೊAಡು ಮಾನ್ಯತೆ ಇರುವ ಎಂಐಎಸ್ ಕೋಡ್ ಹೊಂದಿರಬೇಕು.
ಸ್ವಸಹಾಯ ಗುಂಪು ರಚನೆಯಾಗಿ ಕನಿಷ್ಠ 3 ವರ್ಷ ಪೂರೈಸಿರಬೇಕು. ಸ್ವಸಹಾಯ ಗುಂಪು ಮತ್ತು ಗುಂಪಿನ ಸದಸ್ಯರು ಯಾವುದೇ ಅಪರಾಧ ಅಥವಾ ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಹಿನ್ನಲೆ ಹೊಂದಿರಬಾರದು.
ನಗರ ಸ್ಥಳೀಯ ಸಂಸ್ಥೆಯಿAದ ನಿಗಧಿಪಡಿಸಲಾದ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಯ ಗುರಿಗೆ ತಕ್ಕಂತೆ ಕಾರ್ಯನಿರ್ವಹಿಸಲು ಆಸಕ್ತಿ ಮತ್ತು ಬದ್ಧತೆಯನ್ನು ಹೊಂದಿರುವ ಸ್ವ-ಸಹಾಯ ಸಂಘದ ಸದ್ಯಸರು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ