ಮಂಗಳವಾರ, ಏಪ್ರಿಲ್ 7, 2026
ಆರೋಗ್ಯ ಕೇಂದ್ರದ ಕಟ್ಟಡ ದುರಸ್ತಿ; ಪಾರ್ವತಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ
ಬಳ್ಳಾರಿ,ಏ.07(ಕರ್ನಾಟಕ ವಾರ್ತೆ):
ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ (ಬಿಎಂಸಿಆರ್‌ಸಿ) ಅಡಿಯಲ್ಲಿ ಬರುವ ನಗರ ಆರೋಗ್ಯ ಕೇಂದ್ರದ ಕಟ್ಟಡದ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಚಿಕಿತ್ಸಾ ಸ್ಥಳವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.
ನಗರ ಆರೋಗ್ಯ ಕೇಂದ್ರದ ಕಟ್ಟಡ ನವೀಕರಣ ಮತ್ತು ದುರಸ್ತಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿಗೆ ಬರುವ ರೋಗಿಗಳಿಗೆ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಚಿಕಿತ್ಸೆಯನ್ನು ಪರ್ಯಾಯ ಸ್ಥಳಕ್ಕೆ ವರ್ಗಾಯಿಸಲಾಗಿದ್ದು, ಕಾಮಗಾರಿ ಪೂರ್ಣಗೊಳ್ಳುವವರೆಗೆ ರೋಗಿಗಳು ಚಿಕಿತ್ಸೆಗಾಗಿ ಪಾರ್ವತಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬಹುದಾಗಿದೆ.
ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ