ಶನಿವಾರ, ಏಪ್ರಿಲ್ 18, 2026

ಯುವಕ ನಾಪತ್ತೆ: ಪತ್ತೆಗೆ ಮನವಿ

ಬಳ್ಳಾರಿ,ಏ.18(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ಸೋವೇನಹಳ್ಳಿ ಗ್ರಾಮದ ನಿವಾಸಿಯಾದ ಕೆ.ಟಿ. ಅಜ್ಜಯ್ಯ ಎನ್ನುವ 22 ವರ್ಷದ ಯುವಕ ಏ.13 ರಂದು ಮನೆಯಿಂದ ಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. *ಚಹರೆ:* ಎತ್ತರ ಅಂದಾಜು 5.2 ಅಡಿ, ಕೋಲು ಮುಖ, ಗೋಧಿ ಮೈ ಬಣ್ಣ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಟೀ-ಶರ್ಟ್ ಮತ್ತು ಬಳಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕಾಣೆಯಾದ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಚೋರನೂರು ಪೊಲೀಸ್ ಠಾಣೆಯ ದೂ.08395-295100, ಪಿಎಸ್‌ಐ ಮೊ.9480803063, ತೋರಣಗಲ್ಲು ಡಿಎಸ್‌ಪಿ ದೂ.08391-220326, ಮೊ.9480803010, ಸಂಡೂರು ಸಿಪಿಐ ದೂ.08395-260100, ಮೊ.9480803036 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ