ಗುರುವಾರ, ಏಪ್ರಿಲ್ 9, 2026

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಏ.09(ಕರ್ನಾಟಕ ವಾರ್ತೆ): ನಗರದ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಎಂ.ಸAಜಯ್ ನಾಯ್ಕ್ ಎನ್ನುವ 39 ವರ್ಷದ ವ್ಯಕ್ತಿ ಮಾ.08 ರಂದು ಹೊರ ಹೋಗಿ ಬರುವುದಾಗಿ ಹೇಳಿ ಮರಳಿ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ 5 ಅಡಿ, ದುಂಡು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮತ್ತು ಬಿಳಿ ಕೂದಲು ಹೊಂದಿದ್ದು, ಎಡತೊಡೆಯ ಮೇಲೆ ಕಪ್ಪು ಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಗುಲಾಬಿ ಬಣ್ಣದ ಟೀ-ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಹಾಗೂ ಭೋಜ್‌ಪುರಿ ಭಾಷೆ ಮಾತನಾಡುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ