ಶುಕ್ರವಾರ, ಮೇ 29, 2026
ಜೂನ್ 01 ರಂದು ನೇರ ಸಂದರ್ಶನ
ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ):
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಿರುದ್ಯೋಗಿ ಯುವಕರಿಗಾಗಿ ಜೂ.01 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಚೋರನೂರು ರಸ್ತೆಯ ಬಾಬೂಜಿ ನಗರದ 2ನೇ ವಾರ್ಡ್ ನ ಬಸವೇಶ್ವರ ವೃತ್ತದ ಭಾರತ್ ಫೈನಾನ್ಷಿಯಲ್ ಇಂಕ್ಲೂಶನ್ ಲಿಮಿಟೆಡ್ ಕಚೇರಿಯಲ್ಲಿ ವಿಶೇಷ ನೇರ ಸಂದರ್ಶನ ಆಯೋಜಿಸಲಾಗಿದೆ.
ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ವಿಷೇಶ ಸೂಚನೆ: ಈ ಸಂದರ್ಶನದಲ್ಲಿ ವಿಜಯನಗರ ಜಿಲ್ಲೆಯ ಅಭ್ಯರ್ಥಿಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಪಿಯುಸಿ ಅಥವಾ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಸ್ವ-ವಿವರದ ಪ್ರತಿ, ಆಧಾರ್ ಕಾರ್ಡ್ ಪ್ರತಿ ಹಾಗೂ ದ್ವಿಚಕ್ರ ವಾಹನ ಕಡ್ಡಾಯವಾಗಿ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಬಳ್ಳಾರಿ ಅಥವಾ ಮೊ.7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಸದಾವಕಾಶವನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
======
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ