ಶನಿವಾರ, ಮೇ 2, 2026
ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ತೆರವು ಕಾರ್ಯಾಚರಣೆ | ಸರ್ಕಾರದ ವಶಕ್ಕೆ 15.05 ಎಕರೆ ಜಮೀನು ಸ್ವಾಧೀನ
ಬಳ್ಳಾರಿ,ಮೇ 02(ಕರ್ನಾಟಕ ವಾರ್ತೆ):
ಜಿಲ್ಲಾಡಳಿತದಿಂದ ಸರ್ಕಾರದ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಬಳ್ಳಾರಿ (ಗ್ರಾಮಾಂತರ) ಗ್ರಾಮದ ವ್ಯಾಪ್ತಿಯಲ್ಲಿ ಬರುವ ವಿವಿಧ ಸರ್ವೆ ನಂಬರ್‌ಗಳ ಒಟ್ಟು 15.05 ಎಕರೆ ಜಮೀನನ್ನು ಜಿಲ್ಲಾಡಳಿತ ತನ್ನ ಸ್ವಾಧೀನಕ್ಕೆ ಪಡೆದುಕೊಂಡಿದೆ.
ಈಗಾಗಲೇ ಸರ್ಕಾರದ ಜಾಗ ಎಂದು ಗುರುತಿಸಲಾಗಿದ್ದ ಬಳ್ಳಾರಿ ಗ್ರಾಮಾಂತರ ವ್ಯಾಪ್ತಿಯ ಸರ್ವೆ ನಂಬರ್ 977 ರ 9.20 ಎಕರೆ, ಸರ್ವೆ ನಂಬರ್ 976 ರ 4.72 ಎಕರೆ ಮತ್ತು ಸರ್ವೆ ನಂಬರ್ 813 ರ 1.13 ಎಕರೆ ಸೇರಿದಂತೆ ಒಟ್ಟು 15.05 ಎಕರೆ ಜಮೀನುಗಳನ್ನು ಶನಿವಾರ ಅಧಿಕೃತವಾಗಿ ಜಿಲ್ಲಾಡಳಿತದ ಸುಪರ್ದಿಗೆ ಪಡೆಯಲಾಯಿತು.
ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ ಸೇರಿದಂತೆ ಕಂದಾಯ, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಇತರರು ಇದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ