ಶುಕ್ರವಾರ, ಮೇ 15, 2026

ಕಂಪ್ಲಿ: ಮೇ 16 ರಂದು ಜೆಸ್ಕಾಂ ಗ್ರಾಹಕರ ಕುಂದುಕೊರತೆ- ಸಭೆ

ಬಳ್ಳಾರಿ,ಮೇ 15(ಕರ್ನಾಟಕ ವಾರ್ತೆ): ಕಂಪ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಚೇರಿಯಲ್ಲಿ ಮೇ 16 ರಂದು ಬೆಳಿಗ್ಗೆ 10 ಗಂಟೆಗೆ ವಿದ್ಯುತ್ ಗ್ರಾಹಕರ ಕುಂದುಕೊರತೆಗಳ ಸಭೆ ಆಯೋಜಿಸಲಾಗಿದೆ. ಸಭೆಯಲ್ಲಿ ಕಂಪ್ಲಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ತಮ್ಮ ವಿದ್ಯುತ್ ಸರಬರಾಜು, ಬಿಲ್ಲಿಂಗ್ ಸಮಸ್ಯೆಗಳು ಅಥವಾ ಇನ್ನಿತರೆ ತಾಂತ್ರಿಕ ದೂರುಗಳನ್ನು ಸಲ್ಲಿಸಿ ಬಗೆಹರಿಸಿಕೊಳ್ಳಬಹುದು ಎಂದು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ