ಸೋಮವಾರ, ಮೇ 11, 2026

ಪ್ರತಿಷ್ಠಿತ ಶಾಲೆಗಳ ಪ್ರವೇಶ ಪರೀಕ್ಷೆ ಮುಂದೂಡಿಕೆ; ಮೇ 16ಕ್ಕೆ ದಿನ ನಿಗದಿ

ಬಳ್ಳಾರಿ,ಮೇ 11(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ನಡೆಯಬೇಕಿದ್ದ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಈ ಮೊದಲು ಮೇ 12 ರಂದು ನಿಗದಿಯಾಗಿದ್ದ ಪ್ರವೇಶ ಪರೀಕ್ಷೆಯನ್ನು ಈಗ ಮೇ 16 ರಂದು ನಡೆಸಲು ತೀರ್ಮಾನಿಸಲಾಗಿದೆ. ಮೇ 16 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಹೆಡ್ ಪೋಸ್ಟ್ ಆಫೀಸ್ ಹತ್ತಿರದ ಸರ್ಕಾರಿ ಬಾಲಕಿಯರ ಜೂನಿಯರ್ ಕಾಲೇಜಿನಲ್ಲಿ ನಡೆಯಲಿದೆ. ನಗರದ ಅಲ್ಲೀಪುರದ ವಿಶ್ವೇಶ್ವರಯ್ಯ ಪ್ರೌಢ ಶಾಲೆ(ಬೆಸ್ಟ್ ಸ್ಕೂಲ್), ವಿದ್ಯಾನಗರದ ನಂದ ವಸತಿ ಶಾಲೆ, ಬೆಳಗಲ್ ಕ್ರಾಸ್ ನ ಶ್ರೀ ನಂದಿ ಪ್ರೌಢಶಾಲೆ (ಸಿ.ಬಿ.ಎಸ್.ಇ) (ವಸತಿ ರಹಿತ), ಸಿರುಗುಪ್ಪದ ವಿಜಯಮೇರಿ ಪ್ರಾಥಮಿಕ ಶಾಲೆ (ವಸತಿ ಸಹಿತ), ದಮ್ಮೂರಿನ ಬೃಂದಾ ಇಂಟರ್ ನ್ಯಾಷನಲ್ ಸ್ಕೂಲ್(ವಸತಿ ಸಹಿತ) ಶಾಲೆಗಳಿಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳು ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು-ಬಳ್ಳಾರಿ ಮೊ.8495026070, ಸಿರುಗುಪ್ಪ ಮೊ.9742581434 ಹಾಗೂ ಸಂಡೂರು ಮೊ.9448316710 ಗೆ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ