ಗುರುವಾರ, ಮೇ 14, 2026

ಬಳ್ಳಾರಿ: ಮೇ 21 ರಂದು ಸರ್ಕಾರಿ ಐಟಿಐ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

ಬಳ್ಳಾರಿ,ಮೇ 14(ಕರ್ನಾಟಕ ವಾರ್ತೆ): ನಗರದ ರೇಡಿಯೋ ಪಾರ್ಕ್ ಪ್ರದೇಶದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಂಗಳೂರಿನ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಮೇ 21 ರಂದು ಬೆಳಿಗ್ಗೆ 9 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. *ಅರ್ಹತೆ:* ಫಿಟ್ಟರ್, ಟರ್ನರ್, ಎಲೆಕ್ಟಿçಷಿಯನ್, ವೆಲ್ಡರ್, ಇ.ಎಂ., ಎಂ.ಎA.ವಿ., ಡೀಸೆಲ್ ಮೆಕ್ಯಾನಿಕ್, ಎಂ.ಇ.ವಿ ವೃತ್ತಿಗಳಲ್ಲಿ ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವವರು ಅಥವಾ ಐಟಿಐ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. *ಅಗತ್ಯವಿರುವ ದಾಖಲೆಗಳು:* ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಇತ್ತೀಚಿನ ಭಾವಚಿತ್ರಗಳು, ಆಧಾರ್ ಕಾರ್ಡ್ ಪ್ರತಿ, ಬಯೋಡೇಟಾ, ತಮ್ಮ ಸ್ಮಾರ್ಟ್ ಫೋನ್ ಅನ್ನು ತಪ್ಪದೇ ತರಬೇಕು. ಸೂಚನೆ: ಅಭ್ಯರ್ಥಿಗಳ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ. ಅರ್ಹ ಅಭ್ಯರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಾಚಾರ್ಯ ಕೆ.ಹೆಚ್.ಎಂ. ಪಂಡಿತಾರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ