ಶನಿವಾರ, ಮೇ 16, 2026
ಮೇ 21 ರಂದು ‘ಸಾರಿಗೆ ಅದಾಲತ್’ ಸಭೆ
ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ):
ಸಾರ್ವಜನಿಕರ ಸಾರಿಗೆ ಸಂಬAಧಿತ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ಬಳ್ಳಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಮೇ 21 ರಂದು ಬೆಳಿಗ್ಗೆ 11.30 ಗಂಟೆಗೆ ‘ಸಾರಿಗೆ ಅದಾಲತ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ತಮ್ಮ ಸಾರಿಗೆ ಇಲಾಖೆಗೆ ಸಂಬAಧಿಸಿದ ಕುಂದುಕೊರತೆಗಳು ಹಾಗೂ ಸಮಸ್ಯೆಗಳ ಕುರಿತು ಅರ್ಜಿಗಳ ಮುಖಾಂತರ ದೂರನ್ನು ಸಲ್ಲಿಸಬಹುದಾಗಿದೆ. ಸಲ್ಲಿಕೆಯಾಗುವ ಸಾರ್ವಜನಿಕರ ಕುಂದುಕೊರತೆಗಳನ್ನು ಅಧಿಕಾರಿಗಳು ಪರಿಶೀಲಿಸಿ, ಸ್ಥಳದಲ್ಲೇ ಸೂಕ್ತ ಪರಿಹಾರ ಹಾಗೂ ಇತ್ಯರ್ಥ ಗೊಳಿಸಲಿದ್ದಾರೆ.
ಜಿಲ್ಲೆಯ ಸಾರ್ವಜನಿಕರು ಹಾಗೂ ವಾಹನ ಸವಾರರು ಈ ಸಾರಿಗೆ ಅದಾಲತ್‌ನ ಪ್ರಯೋಜನವನ್ನು ಪಡೆದುಕೊಂಡು, ಬಾಕಿ ಇರುವ ತಮ್ಮ ವಿವಿಧ ಅರ್ಜಿಗಳನ್ನು ಪೂರ್ಣಗೊಳಿಸಿಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ