ಸೋಮವಾರ, ಮೇ 25, 2026

ಮೇ 27ಕ್ಕೆ ‘ನಿಧಿ ಆಪ್ಕೆ ನಿಕಟ್' ಕಾರ್ಯಕ್ರಮ

ಬಳ್ಳಾರಿ,ಮೇ 25(ಕರ್ನಾಟಕ ವಾರ್ತೆ): ನಗರದ ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್‌ಓ) ಪ್ರಾದೇಶಿಕ ಕಚೇರಿಯ ವತಿಯಿಂದ ಮೇ ಮಾಹೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮದ ದಿನ ಬದಲಾವಣೆ ಮಾಡಲಾಗಿದೆ ಎಂದು ಇಪಿಎಫ್‌ಒ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಕೆ.ವಿ. ಪ್ರವೀಣ್ ತಿಳಿಸಿದ್ದಾರೆ. ಪೂರ್ವರೂಪಿತ ವೇಳಾಪಟ್ಟಿಯಂತೆ ಈ ಕಾರ್ಯಕ್ರಮ ಮೇ 28 ರಂದು ರಂದು ನಡೆಯಬೇಕಾಗಿತ್ತು. ಆದರೆ, ಈದ್-ಉಲ್-ಜುಹಾ (ಬಕ್ರೀದ್) ಹಬ್ಬದ ನಿಮಿತ್ತ ಸರ್ಕಾರಿ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮವನ್ನು ಒಂದು ದಿನ ಮುಂಚಿತವಾಗಿ ಅಂದರೆ ಮೇ 27 ರಂದು ನಡೆಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕೇವಲ ದಿನಾಂಕದಲ್ಲಿ ಮಾತ್ರ ಬದಲಾವಣೆಯಾಗಿದ್ದು, ಸಾರ್ವಜನಿಕರು ಹಾಗೂ ಚಂದಾದಾರರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ