ಶುಕ್ರವಾರ, ಮೇ 29, 2026

ಮೇ 31 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ಬಳ್ಳಾರಿ ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-25 ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 31 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಗರದ ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟ್ಯಾಂಡ್, ದೊಡ್ಡ ಮಾರ್ಕೆಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಕಂಬಳಿ ಬಜಾರ್, ಅಲ್ಲಂ ಕಾಂಪೌಂಡ್, ನಾಗಪ್ಪ ಕಟ್ಟೆ, ಫ್ಲವರ್ಸ್ ಸ್ಟ್ರೀಟ್ ಹಾಗೂ ಇಂಡಸ್ಟ್ರಿಯಲ್ ಏರಿಯಾ ಹಂತ-1 ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂಒ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ======

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ