ಶನಿವಾರ, ಮೇ 30, 2026
ಮೇ 31 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ):
ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-23 ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 31 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಗಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಜೆಸ್ಕಾಂ ಇಲಾಖೆಯೋಂದಿಗೆ ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಏರಿಯಾಗಳು:
ಹೆಚ್.ಆರ್.ಗವಿಯಪ್ಪ ವೃತ್ತ, ತೇರು ಬೀದಿ, ಜೈನ್ ಮಾರ್ಕೆಟ್, ಕಾಳಮ್ಮ ಸ್ಟ್ರೀಟ್, ಲಾರಿಟರ್ಮಿನಲ್, ಡಾ.ಜೋಳದರಾಶಿ ದೊಡ್ಡನಗೌಡ ರಂಗ ಮಂದಿರ, ಹೊಸ ಬಸ್ ನಿಲ್ದಾಣ, ಬಂಡಿಮೊಟ್, ಗೊಲ್ಲರಹಟ್ಟಿ, ಮಾರುತಿ ಕಾಲೋನಿ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯತ್ ವ್ಯತ್ಯಯವಾಗಲಿದೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ