ಸೋಮವಾರ, ಮೇ 18, 2026

ಬೆಂಬಲ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿ

ಬಳ್ಳಾರಿ,ಮೇ 18(ಕರ್ನಾಟಕ ವಾರ್ತೆ): ಕೃಷಿ ಮಾರಾಟ ಇಲಾಖೆ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ವತಿಯಿಂದ 2025-26 ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನವನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಪ್ರಕ್ರಿಯೆ ಆರಂಭಿಸಲಾಗಿದೆ. *ಬೆAಬಲ ಬೆಲೆ ಮತ್ತು ಖರೀದಿ ಏಜೆನ್ಸಿ:* ಕೇಂದ್ರ ಸರ್ಕಾರ ನಿಗದಿಪಡಿಸಿದಂತೆ ಪ್ರತಿ ಕ್ವಿಂಟಾಲ್‌ಗೆ ರೂ. 7,721 ಹಾಗೂ ಕರ್ನಾಟಕ ಸಹಕಾರ ಎಣ್ಣೇ ಬೀಜ ಬೆಳೆಗಾರರ ಮಾರಾಟ ಮಹಾ ಮಂಡಳ ನಿಯಮಿತ, ಬಳ್ಳಾರಿ ಶಾಖೆಯು ಖರೀದಿ ಏಜೆನ್ಸಿಯಾಗಿದೆ. ಒಣಗಿದ ಹಾಗೂ ಸ್ವಚ್ಛವಾಗಿರುವ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಮಾತ್ರ ಖರೀದಿಸಲಾಗುವುದು. *ಖರೀದಿ ಕೇಂದ್ರದ ವಿವರ:* ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಬಳ್ಳಾರಿ ರಸ್ತೆ, ವಿಜಯ ಸರ್ಕಲ್, ಸಂಡೂರು. ಹೆಚ್ಚಿನ ಮಾಹಿತಿಗಾಗಿ ಶಿವಲಿಂಗಪ್ಪ (9980676497) ಮತ್ತು ಶಿವಮೂರ್ತಿ ಡಿ.ಹೆಚ್ (8722047273) ಗೆ ಸಂಪರ್ಕಿಸಬಹುದಾಗಿದೆ. ರೈತರು ನೋಂದಾಯಿಸಿಕೊಳ್ಳಲು ಜೂನ್ 25 ರವರೆಗೆ ಅವಕಾಶ ಕಲ್ಪಿಸಲಾಗಿದೆ ಹಾಗೂ ಜುಲೈ 05 ರ ವರೆಗೆ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಪ್ರತಿ ಎಕರೆಗೆ 4 ಕ್ವಿಂಟಾಲ್‌ನAತೆ, ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. *ಅಗತ್ಯವಿರುವ ದಾಖಲೆಗಳು:* ಖರೀದಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಲು ರೈತರು 2025-26 ನೇ ಸಾಲಿನ ಪಹಣಿ ಪತ್ರ, ರೈತರು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿಕೊAಡಿರಬೇಕು (ಎಫ್‌ಐಡಿ ಇಲ್ಲದಿದ್ದರೆ ಅಥವಾ ತಾಂತ್ರಿಕ ತೊಂದರೆ ಇದ್ದರೆ ಕೃಷಿ ಇಲಾಖೆಯನ್ನು ಸಂಪರ್ಕಿಸಬಹುದು). ಮೂಲ ಆಧಾರ್ ಕಾರ್ಡ್, ಆಧಾರ್ ಕಾರ್ಡ್ನೊಂದಿಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ. *ವಿಶೇಷ ಸೂಚನೆ:* ಜಿಲ್ಲೆಯ ರೈತರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ (ದಲ್ಲಾಳಿಗಳ) ಮೊರೆ ಹೋಗದೆ, ನೇರವಾಗಿ ಖರೀದಿ ಕೇಂದ್ರಗಳನ್ನು ಸಂಪರ್ಕಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ