ಮಂಗಳವಾರ, ಮೇ 19, 2026

ಬಳ್ಳಾರಿ ನಗರದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ: ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಇಲಾಖೆ ಮನವಿ

ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ): ನಗರದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಸಾರ್ವಜನಿಕರ ಬಳಕೆಗೆ ಬೇಕಾಗುವಷ್ಟು ಅಗತ್ಯ ಇಂಧನ ದಾಸ್ತಾನು ಲಭ್ಯವಿದೆ. ನಗರದಲ್ಲಿ ಯಾವುದೇ ರೀತಿಯ ಪೆಟ್ರೋಲ್ ಅಥವಾ ಡೀಸೆಲ್ ಕೊರತೆ ಇರುವುದಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ದೇವರಾಜ ಅವರು ತಿಳಿಸಿದ್ದಾರೆ. ಇತ್ತೀಚೆಗೆ ಬಳ್ಳಾರಿ ನಗರದ ಕೂಲ್ ಕಾರ್ನರ್ ಬಳಿ ಇರುವ ಪೆಟ್ರೋಲ್ ಬಂಕ್‌ನಲ್ಲಿ ಇಂಧನ ದಾಸ್ತಾನು ಇಲ್ಲ ಹಾಗೂ ಇಡೀ ನಗರಾದ್ಯಂತ ದಾಸ್ತಾನು ಕೊರತೆ ಎದುರಾಗಿದೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿತ್ತು. ಹಾಗಾಗಿ ಸಾರ್ವಜನಿಕರು ಹಾಗೂ ಗ್ರಾಹಕರು ಇಂಧನ ಕೊರತೆ ಕುರಿತಾದ ಯಾವುದೇ ರೀತಿಯ ಸುಳ್ಳು ಸುದ್ದಿ ಅಥವಾ ವದಂತಿಗಳಿಗೆ ಕಿವಿಗೊಡಬಾರದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ