ಗುರುವಾರ, ಮೇ 21, 2026
ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ – ಪತ್ತೆಗೆ ಮನವಿ
ಬಳ್ಳಾರಿ,ಮೇ 21(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಸುಲ್ತಾನಪುರ ಗ್ರಾಮದ ನಿವಾಸಿ ಉಮಾದೇವಿ (34 ವರ್ಷ) ಹಾಗೂ ಅವರ ಮಕ್ಕಳಾದ ಜಯಶ್ರೀ (14 ವರ್ಷ), ನಾಗರತ್ನ (10 ವರ್ಷ) ಎಂಬುವವರು ಮೇ 15ರಂದು ಕಾಣೆಯಾಗಿದ್ದು, ಈ ಕುರಿತು ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಉಪ-ನಿರೀಕ್ಷಕರು ಮನವಿ ಮಾಡಿದ್ದಾರೆ.
*ನಾಪತ್ತೆಯಾದವರ ಚಹರೆ ಗುರುತು:*
*ಉಮಾದೇವಿ:* ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೊರಡುವಾಗ ಕಡು ನೀಲಿ ಬಣ್ಣದ ಸೀರೆ ಹಾಗೂ ಕುಪ್ಪಸ ಧರಿಸಿದ್ದರು. ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.
*ಎಸ್.ಜಯಶ್ರೀ:* ದುಂಡು ಮುಖ, ಗೋಧಿ ಮೈಬಣ್ಣ, ಸದೃಢ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಗುಲಾಬಿ ಬಣ್ಣದ ಪ್ರಾಕ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾಳೆ.
*ಎಸ್.ನಾಗರತ್ನ:* ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಟಿ-ಶರ್ಟ್, ಕಂದು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾಳೆ.
ಈ ಮಹಿಳೆ ಮತ್ತು ಮಕ್ಕಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಬಳ್ಳಾರಿ ಎಸ್.ಪಿ ಕಚೇರಿ ದೂ.08392-258100, ತೋರಣಗಲ್ಲು ಡಿ.ಎಸ್.ಪಿ ಮೊ.9480803010, ಕುರುಗೋಡು ವೃತ್ತ ಸಿಪಿಐ ಮೊ.9480803039, ಕುಡುತಿನಿ ಪೊಲೀಸ್ ಠಾಣೆಯ ಪಿಎಸ್‌ಐ ಮೊ.9480803078 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ