ಶನಿವಾರ, ಮೇ 16, 2026

ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ): ಬಳ್ಳಾರಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ 2026-27ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕೀಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. *ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು (5 ರಿಂದ 10ನೇ ತರಗತಿ):* 5 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತಾಲೂಕಿನ ಪ್ರಮುಖ ನಿಲಯಗಳಾದ ಬಳ್ಳಾರಿ, ಮೋಕಾ, ಚೆಳ್ಳಗುರ್ಕಿ ಹಾಗೂ ಕುಡುತಿನಿಯ ಬಾಲಕರ ವಿದ್ಯಾರ್ಥಿನಿಲಯಗಳು ಮತ್ತು ಬಳ್ಳಾರಿ ಹಾಗೂ ಕುಡುತಿನಿಯ ಬಾಲಕೀಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಮುಕ್ತವಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. *ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು (ಕಾಲೇಜು ವಿದ್ಯಾರ್ಥಿಗಳಿಗೆ):* ಬಳ್ಳಾರಿ ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕೀಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೂ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಮಂಜೂರಾತಿ ಸಂಖ್ಯಾಬಲದಲ್ಲಿ ಶೇ. 75 ರಷ್ಟನ್ನು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಹಾಗೂ ಇನ್ನುಳಿದ ಶೇ. 25 ರಷ್ಟನ್ನು ಪರಿಶಿಷ್ಟ ಪಂಗಡ ಮತ್ತು ಇತರೆ ಜಾತಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಲಿಂಕ್ sತಿಜhmis.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅದರ ಸ್ವೀಕೃತಿ ಪ್ರತಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಬಳ್ಳಾರಿಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ಸಂಬAಧಪಟ್ಟ ವಿದ್ಯಾರ್ಥಿನಿಲಯದ ವಾರ್ಡನ್‌ರವರಿಗೆ ಸಲ್ಲಿಸಬೇಕಾಗುತ್ತದೆ. *ಬೇಕಾಗುವ ದಾಖಲೆಗಳು:** ಸ್ಯಾಟ್ಸ್ ಸಂಖ್ಯೆ, ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಭಾವಚಿತ್ರ, ಬ್ಯಾಂಕ್ ಖಾತೆ ಸಂಖ್ಯೆ, ಮೊಬೈಲ್ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿ, ತಂದೆ/ತಾಯಿಯ ಆಧಾರ್ ಸಂಖ್ಯೆ. ಹೆಚ್ಚಿನ ವಿವರಗಳಿಗಾಗಿ ಕಚೇರಿಯ ದೂ.08392-244738 ಗೆ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ