ಬುಧವಾರ, ಮೇ 20, 2026

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ (ಕೇವಲ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2026-27ನೇ ಸಾಲಿನ ಹೊಸ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ (ಶಾಲಾ ವಿದ್ಯಾರ್ಥಿಗಳಿಗೆ) ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜೂನ್ 08 ರವರೆಗೆ ಕಾಲಾವಕಾಶವಿರುತ್ತದೆ. ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ (ಕೇವಲ ಪಿಯುಸಿ ವಿದ್ಯಾರ್ಥಿಗಳಿಗೆ) ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ. *ಪೋಷಕರ ವಾರ್ಷಿಕ ಆದಾಯ ಮಿತಿ:* ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯದ ಮಿತಿ ರೂ.2.50 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ವಾರ್ಷಿಕ ಆದಾಯದ ಮಿತಿ ರೂ.1 ಲಕ್ಷ ನಿಗದಿಪಡಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ತಂತ್ರಾAಶವಾದ (https://shp.karnataka.gov.in) ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ