ಬುಧವಾರ, ಮೇ 13, 2026

ವ್ಯಕ್ತಿ ನಾಪತ್ತೆ - ಪತ್ತೆಗೆ ಮನವಿ

ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ): ನಗರದ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ವಟ್ಟಪ್ಪಗೇರಿಯ ನಿವಾಸಿ ಯೇಸುದಾಸ್ ಎನ್ನುವ 43 ವರ್ಷದ ವ್ಯಕ್ತಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದ್ದು, ಪತ್ತೆಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ಘಟನೆಯ ವಿವರ: ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಜ್ಯೋತಿ ಎಂಬುವವರ ಪತಿ ಯೇಸುದಾಸ್ ಎಂಬುವವರು 2022ರ ಜ.02 ರಿಂದ ನಾಪತ್ತೆಯಾಗಿದ್ದಾರೆ. ದೂರಿನ ಅನ್ವಯ ತಾವು ಸಾಲ ಮಾಡಿಕೊಂಡಿರುವುದಾಗಿಯೂ ಮತ್ತು ಸಾಲಗಾರರು ಹಣ ಮರಳಿಸುವಂತೆ ಕೇಳುತ್ತಿದ್ದಾರೆ ಎಂದು ಪತ್ನಿಗೆ ತಿಳಿಸಿದ್ದರು. ಅಂದಿನಿAದ ಅವರು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ. ವ್ಯಕ್ತಿಯ ಚಹರೆ ಗುರುತು: ಎತ್ತರ ಸುಮಾರು 5.6 ಅಡಿ, ದುಂಡು ಮುಖ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೆಇಬಿ ಲೈನ್ ಮ್ಯಾನ್ ಕೆಲಸ ಮಾಡುತ್ತಿರುತ್ತಾನೆ. ಮನೆಯಿಂದ ಹೊರಡುವಾಗ ಯಾವ ಬಟ್ಟೆ ಧರಿಸಿದ್ದನು ಎಂಬ ಮಾಹಿತಿ ಲಭ್ಯವಿಲ್ಲ. ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆ ದೂ.08392-240731, 244145, ಬಳ್ಳಾರಿ ಕಂಟ್ರೋಲ್ ರೂಂ 08392-258100, ಕೌಲ್ ಬಜಾರ್ ಠಾಣೆ ಪಿಐ ಮೊ.9480803047, ಪಿ.ಎಸ್.ಐ 94808203084, 9480803085 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ