ಶುಕ್ರವಾರ, ಮೇ 15, 2026

ಅಪರಿಚಿತ ವ್ಯಕ್ತಿ ಆತ್ಮಹತ್ಯೆ - ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಮೇ 15(ಕರ್ನಾಟಕ ವಾರ್ತೆ): ಬಳ್ಳಾರಿ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಮೇ 13 ರಂದು ತೋರಣಗಲ್ಲು ರೈಲ್ವೇ ನಿಲ್ದಾಣದ ಯಾರ್ಡ್ ಹತ್ತಿರವಿರುವ ರೈಲ್ವೇ ಕಿ.ಮೀ ಸಂಖ್ಯೆ 175/0 ರ ಬಳಿ ಈ ಘಟನೆ ಸಂಭವಿಸಿದೆ. ಚಲಿಸುವ ರೈಲಿಗೆ ತಲೆಕೊಟ್ಟು ವ್ಯಕ್ತಿಯು ಪ್ರಾಣ ಕಳೆದುಕೊಂಡಿದ್ದು, ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಚಹರೆ ಮತ್ತು ಉಡುಪುಗಳು: ಎತ್ತರ ಸರಿ ಸುಮಾರು 5.6 ಅಡಿ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಕಪ್ಪು ಕೂದಲು ಹಾಗೂ ಗಡ್ಡ ಮೀಸೆ ಇರುತ್ತದೆ. ಹಸಿರು ಮತ್ತು ಬಿಳಿ ಬಣ್ಣದ ಅರ್ಧ ತೋಳಿನ ಟೀ ಶರ್ಟ್, ಬಿಳಿ ಬಣ್ಣದ ಬನಿಯಾನ್ ಮತ್ತು ಗುಲಾಬಿ ಬಣ್ಣದ ಒಳ ಉಡುಪು, ಬ್ರೌನ್ ಬಣ್ಣದ ನೈಟ್ ಪ್ಯಾಂಟ್, ಕಪ್ಪು ಬಣ್ಣದ ಚಪ್ಪಲಿ ಧರಿಸಿರುತ್ತಾನೆ. ಯಾರಿಗಾದರೂ ಮೃತನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ ಅಥವಾ ವಾರಸುದಾರರ ಬಗ್ಗೆ ಸುಳಿವು ಇದ್ದಲ್ಲಿ ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆ: 08392-276063, ಬೆಂಗಳೂರು ರೈಲ್ವೇ ಪೊಲೀಸ್ ಕಂಟ್ರೋಲ್ ರೂಂ 080-22871291 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ