ಮಂಗಳವಾರ, ಮೇ 19, 2026
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಬಿಡುಗಡೆ
ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ):
2022ನೇ ಸಾಲಿನಲ್ಲಿ ಮುದ್ರಣಗೊಂಡು, ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾಗಿರುವ ಕನ್ನಡ, ಆಂಗ್ಲ, ಹಿಂದಿ ಹಾಗೂ ಇತರ ಭಾರತೀಯ ಭಾಷೆಗಳ ಅಧಿಕೃತ ಪುಸ್ತಕಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ರಾಜ್ಯ ಮಟ್ಟದ ಪುಸ್ತಕ ಸಮಿತಿಯು ಸಭೆಗಳನ್ನು ಜರುಗಿಸಿ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಸರ್ಕಾರದ ಮಾರ್ಗಸೂಚಿಗಳನ್ವಯ ಪುಸ್ತಕಗಳ ಅಳತೆ ಮತ್ತು ಕಾಗದದ ಗುಣಮಟ್ಟವನ್ನು ಪರಿಶೀಲಿಸಿ ಬೆಲೆ ನಿಗದಿಪಡಿಸಲಾಗಿದೆ. ನಿಯಮಾನುಸಾರ ಪ್ರತಿ ಪುಟದಲ್ಲಿ ಸಹಿ ಮಾಡಿ, ಖರೀದಿ ಪ್ರಕ್ರಿಯೆಗಾಗಿ ಸರ್ಕಾರದಿಂದ ಅನುಮೋದಿಸಲಾದ ಅಧಿಕೃತ ಆಯ್ಕೆ ಪಟ್ಟಿಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯಗಳಿಗೆ ಈಗಾಗಲೇ ಕಳುಹಿಸಿಕೊಡಲಾಗಿದೆ.
ಪುಸ್ತಕಗಳ ಆಯ್ಕೆ ಪಟ್ಟಿ ಬಿಡುಗಡೆಯಾಗಿರುವ ಕುರಿತು ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶನ ಸಂಸ್ಥೆಗಳು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ನಗರ ಕೇಂದ್ರ ಗ್ರಂಥಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ