ಮಂಗಳವಾರ, ಮೇ 19, 2026
ಬಳ್ಳಾರಿ: ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಪ್ರವೇಶಾತಿ ಆರಂಭ; ಉಚಿತ ಅರ್ಜಿ ಸಲ್ಲಿಕೆಗೆ ಅವಕಾಶ
ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ):
ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ (11ನೇ ತರಗತಿ) 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಿಗೆ ಈ ಉಚಿತ ಪ್ರವೇಶಾತಿ ಲಭ್ಯವಿದ್ದು, ಆಸಕ್ತ ವಿದ್ಯಾರ್ಥಿನಿಯರು ಹಾಗೂ ಪಾಲಕರು ನೇರವಾಗಿ ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಕಾಲೇಜಿನ ಒಟ್ಟು ಸೀಟುಗಳಲ್ಲಿ ನಿಯಮಾನುಸಾರ ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ.75 ರಷ್ಟು ಸೀಟುಗಳು ಮತ್ತು ಇತರ ಸಮುದಾಯಗಳಿಗೆ ಶೇ.25 ರಷ್ಟು ಸೀಟುಗಳು ಮೀಸಲಾತಿ ಕಲ್ಪಿಸಲಾಗಿದೆ.
*ಕಾಲೇಜಿನ ವಿಳಾಸ ಮತ್ತು ಸಂಪರ್ಕ ಸಂಖ್ಯೆ:*
ಪ್ರಾAಶುಪಾಲರು, ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು, ಬಳ್ಳಾರಿ (ಶ್ರೀಮತಿ ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಆವರಣ, ಬಳ್ಳಾರಿ) ಮೊ.8861623814, 9481174879.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ