ಮಂಗಳವಾರ, ಮೇ 26, 2026
ಕರ್ನಾಟಕ ಪ.ಜಾತಿ/ಪ.ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಬಳ್ಳಾರಿ ಪ್ರವಾಸ
ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ):
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಅವರು ಮೇ 26 ರಿಂದ ಮೇ 28 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳುವರು.
ಮೇ 26 ರಂದು ಅಧ್ಯಕ್ಷರು ಸಂಜೆ ಬೆಂಗಳೂರಿನಿAದ ನಿರ್ಗಮಿಸಿ ರಾತ್ರಿ ಬಳ್ಳಾರಿ ತಲುಪಿ ವಾಸ್ತವ್ಯ ಮಾಡುವರು.
ಮೇ 27 ರಂದು ಬೆಳಿಗ್ಗೆ 10.30 ಗಂಟೆಗೆ ಸಿರಗುಪ್ಪ ತಾಲ್ಲೂಕಿನ ಸಿರಿಗೇರಿ ಗ್ರಾಮದ ಶಂಭುಲಿAಗೇಶ್ವರ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿರುವ ಅನ್ನಪೂರ್ಣ ಪ್ರಕಾಶನದ ‘ಪಿ.ಲಂಕೇಶ್ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡುವರು.
ನಂತರ ಮಧ್ಯಾಹ್ನ 03 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಲೆಮಾರಿ ಸಮುದಾಯದ ಸಂಘ ಸಂಸ್ಥೆಗಳಿAದ ಹಾಗೂ ಸಾಮಾನ್ಯ ಜನರಿಂದ ಕುಂದುಕೊರತೆಗಳ ಅಹವಾಲು ಸ್ವೀಕರಿಸುವರು.
ಬಳಿಕ ಮಧ್ಯಾಹ್ನ 03.30 ಗಂಟೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಇತರೆ ಇಲಾಖಾ ಅಧಿಕಾರಿಗಳೊಂದಿಗೆ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ, ಅನುಪಾಲನಾ ವರದಿ ಹಾಗೂ ಜಿಲ್ಲಾಡಳಿತಕ್ಕೆ ನಡೆಸಲಾದ ಪತ್ರ ವ್ಯವಹಾರಗಳ ಕುರಿತು ಸಮಾಲೋಚನೆ ಸಭೆ ನಡೆಸುವರು.
ಸಂಜೆ 5.30 ಗಂಟೆಗೆ ಅದೇ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸುವರು. ಬಳಿಕ ವಾಸ್ತವ್ಯ ಮಾಡುವರು.
ಮೇ 28 ರಂದು ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ನಗರದ 6ನೇ ವಾರ್ಡ್, ಬಂಡಿಮೋಟ್ ತಾಯಮ್ಮಗುಡಿ ಹತ್ತಿರವಿರುವ ಕೊರಚರ ಗೇರಿಯ ಪರಿಶಿಷ್ಟ ಜಾತಿ ಅಲೆಮಾರಿ ಕೊರಚ ಸಮುದಾಯದ ಕುಟುಂಬಗಳು ವಾಸಿಸುವ ಸ್ಥಳಗಳಿಗೆ ಭೇಟಿ ನೀಡಿ, ಸ್ಥಳೀಯ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ನಂತರ ಮಧ್ಯಾಹ್ನ 02 ಗಂಟೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಶಶಿಧರ್ ಎಂ.ಬಿ ಅವರು ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ