ಮಂಗಳವಾರ, ಮೇ 19, 2026
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ಹಾಗೂ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ):
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಅವರ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
2026-27ನೇ ಸಾಲಿಗೆ ಪ್ರಥಮ ಪ್ರಯತ್ನದಲ್ಲಿಯೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್‌ಎಸ್‌ಎಲ್‌ಸಿ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದು. ಇದರೊಂದಿಗೆ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೂ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು.
ಸಮಾಜ ಕಲ್ಯಾಣ ಇಲಾಖೆಯ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿರುವ ಎಸ್‌ಎಸ್‌ಎಲ್‌ಸಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾವಕಾಶ ಕಾರ್ಯಕ್ರಮಗಳನ್ನು ಹೆಚ್‌ಎಂಐಎಸ್ ಪೋರ್ಟಲ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ www.sw.kar.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ(ಮೊ.9480843023), ಕೌಲ್ ಬಜಾರ್ 1ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ(ಮೊ.9480843073), ಸಂಡೂರು ಪಟ್ಟಣದ ಸಿಡಿಪಿಒ ಕಚೇರಿ ಹತ್ತಿರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ(ಮೊ.9480843079), ಸಿರುಗುಪ್ಪ ಪಟ್ಟಣದ ಈಡಿಗರ ಶೀನಪ್ಪ ಲೇಔಟ್‌ನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ(ಮೊ.9480843078) ಗೆ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ