ಮಂಗಳವಾರ, ಮೇ 19, 2026

ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಖೇಲೋ ಇಂಡಿಯಾ ಹಾಕಿ' ತರಬೇತಿ ಆರಂಭ: ಅರ್ಜಿ ಆಹ್ವಾನ

ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ): ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಹೊಸದಾಗಿ ‘ಖೇಲೋ ಇಂಡಿಯಾ' ಯೋಜನೆಯಡಿ ಹಾಕಿ ಕ್ರೀಡಾ ತರಬೇತಿಯನ್ನು ಪ್ರಾರಂಭಿಸಲಾಗಿದೆ. ಕ್ರೀಡೆಯಲ್ಲಿ ಆಸಕ್ತಿಯುಳ್ಳ ಬಾಲಕ ಮತ್ತು ಬಾಲಕಿಯರಿಂದ ನೋಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 8 ವರ್ಷ ಮೇಲ್ಪಟ್ಟ 16 ವರ್ಷದೊಳಗಿನ ಬಾಲಕ-ಬಾಲಕಿಯರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ತಮ್ಮ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ನೋAದಣಿ ಮಾಡಿಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಖೇಲೋ ಇಂಡಿಯಾ ಹಾಕಿ ತರಬೇತುದಾರರಾದ ಜೊಹ್ರಾ ಶಮೀಮ್ (ಮೊ.9845778608) ಅವರನ್ನು ಸಂಪರ್ಕಿಸಬಹುದು ಅಥವಾ ಬಳ್ಳಾರಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ