ಮಂಗಳವಾರ, ಮೇ 19, 2026
ಬಳ್ಳಾರಿ: ಮೌಲಾನಾ ಆಜಾದ್ ಮಾದರಿ ಶಾಲೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ):
ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹೊಸದಾಗಿ ಮಂಜೂರಾಗಿರುವ ಕೌಲ್‌ಬಜಾರ್‌ನ ಮೌಲಾನಾ ಆಜಾದ್ ಮಾದರಿ ಶಾಲೆಗೆ (ಆಂಗ್ಲ ಮಾಧ್ಯಮ) 2026-27ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ವಿವಿಧ ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಳ್ಳಾರಿಯ ಕೌಲ್‌ಬಜಾರ್‌ನಲ್ಲಿರುವ ಮಹಮ್ಮದ್ ಟ್ರೆöÊನಿಂಗ್ ಸ್ಕೂಲ್ ಆವರಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ನೂತನ ಮೌಲಾನಾ ಆಜಾದ್ ಮಾದರಿ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿದೆ.
*ಖಾಲಿ ಇರುವ ಹುದ್ದೆಗಳ ವಿವರ:*
ಆಂಗ್ಲ ಭಾಷಾ ಶಿಕ್ಷಕರು-01, ಉರ್ದು/ಹಿಂದಿ ಭಾಷಾ ಶಿಕ್ಷಕರು-01, ಗಣಿತ ಶಿಕ್ಷಕರು-01, ವಿಜ್ಞಾನ ಶಿಕ್ಷಕರು-01, ಸಮಾಜ ವಿಜ್ಞಾನ ಶಿಕ್ಷಕರು-01.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ), ಕೌಲ್‌ಬಜಾರ್, ಬಳ್ಳಾರಿ (ಮೊ.8861623814) ಇವರನ್ನು ಸಂಪರ್ಕಿಸಬಹುದು ಅಥವಾ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ