ಶನಿವಾರ, ಮೇ 30, 2026

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2026-27ನೇ ಸಾಲಿನ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿರುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಸಮುದಾಯಗಳ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ (ಪಿಯುಸಿ ಸಮಾನಾಂತರ ಕೋರ್ಸ್ ಗಳಾದ ಡಿಪ್ಲೋಮಾ, ಐಟಿಐ) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಅಧಿಕೃತ ಪೋರ್ಟಲ್ https://shp.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಜೂನ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿ: ಪ್ರವರ್ಗ-1, ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ವಾರ್ಷಿಕ ಆದಾಯ ರೂ. 2.50 ಲಕ್ಷ ಒಳಗಿರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ ವಾರ್ಷಿಕ ಆದಾಯ ರೂ.1 ಲಕ್ಷ ಒಳಗಿರಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ಅಥವಾ ಗೊಂದಲಗಳಿದ್ದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ನೇರವಾಗಿ ಭೇಟಿ ನೀಡಬಹುದು. ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ