ಮಂಗಳವಾರ, ಮೇ 19, 2026
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಬಳ್ಳಾರಿ ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿಗೆ 2026-27ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ (ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗ) ತರಗತಿಗಳ ಬೋಧನೆಗಾಗಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಎಂ.ಎ. ಬಿ.ಇಡಿ ಅಥವಾ ಎಂ.ಎಸ್ಸಿ ಬಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು. ಕೇವಲ ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿದೆ.
ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಖಾಯಂ ನೇಮಕಾತಿಯಾಗಿರುವುದಿಲ್ಲ. ಇಲಾಖೆಯಿಂದ ಖಾಯಂ ನೇಮಕಾತಿ/ಬಡ್ತಿ ಅಥವಾ ವರ್ಗಾವಣೆ ಮೂಲಕ ಉಪನ್ಯಾಸಕರು ಬಂದಲ್ಲಿ, ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗುವುದು.
ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು (ಶ್ರೀಮತಿ ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಆವರಣ), ಬಳ್ಳಾರಿ ಅಥವಾ ಮೊ.8861623814, 9481174879 ಗೆ ಸಂಪರ್ಕಿಸಬಹುದಾಗಿದೆ.
ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ