ಶನಿವಾರ, ಮೇ 30, 2026

ಕಾಲೇಜು ವಿದ್ಯಾರ್ಥಿಗಳಿಗೆ ನಗದು ಬಹುಮಾನ: ಅರ್ಜಿ ಆಹ್ವಾನ

ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ಜಿಲ್ಲೆಯ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ (ಪಿಯುಸಿ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ - ಪಿಜಿ) ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ನಗದು ಬಹುಮಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ twd.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ, ಅಗತ್ಯವಿರುವ ಎಲ್ಲಾ ಪೂರಕ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿ (ಅಟೆಸ್ಟೆಡ್), ತಾಲ್ಲೂಕು ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ (ವಾಲ್ಮೀಕಿ ಭವನ, ನಲ್ಲಚೇರುವು ಪ್ರದೇಶ, ಬಳ್ಳಾರಿ) ಇಲ್ಲಿಗೆ ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.9110224569 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ತಾಲ್ಲೂಕು ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. =====

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ