ಬುಧವಾರ, ಮೇ 20, 2026
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ):
ತಾಲ್ಲೂಕಿನ ಮೋಕಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಬಳ್ಳಾರಿ- ಆಲೂರು ಎಸ್.ಹೆಚ್ 132 ರಸ್ತೆಯ ಸಿಂಧುವಾಳ ಕ್ರಾಸ್ ಹತ್ತಿರದ ಬಸ್ ತಂಗುದಾಣದಲ್ಲಿ ಸುಮಾರು 50-60 ವರ್ಷದ ಅನಾಮಧೇಯ ವ್ಯಕ್ತಿಯು ಮೇ 06 ರಂದು ಮಲಗಿಕೊಂಡು ಆಕಸ್ಮಿಕವಾಗಿ ಮೃತಟ್ಟಿದ್ದು, ಮೃತನ ವಾರಸುದಾರರ ಮಾಹಿತಿ ಇರುವುದಿಲ್ಲ. ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಮೃತನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಮೋಕಾ ಪೊಲೀಸ್ ಠಾಣೆಯ ಮೊ.9449477851 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ