ಶನಿವಾರ, ಮೇ 30, 2026

ಬಳ್ಳಾರಿ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಪಿಯುಸಿ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು ಸ್ಟೇಟ್ ಹಾಸ್ಟೆಲ್ ಪೋರ್ಟಲ್ ವೆಬ್‌ಸೈಟ್ ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಆ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಬಳ್ಳಾರಿ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕಾಗುತ್ತದೆ. *ಕಚೇರಿ ವಿಳಾಸ:* ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಾಲ್ಮೀಕಿ ಭವನ, ನಲ್ಲಚೇರವು ಪ್ರದೇಶ, ಸ್ಟೇಡಿಯಂ ಹತ್ತಿರ, ಬಳ್ಳಾರಿ. ಹೆಚ್ಚಿನ ಮಾಹಿತಿಗಾಗಿ ಕಚೇರಿ ಮೊ.9110224569 ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಬಳ್ಳಾರಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. =====

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ