ಬುಧವಾರ, ಮೇ 20, 2026
ಸಿರುಗುಪ್ಪ: ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ
ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ):
ಸಿರುಗುಪ್ಪ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 2026-27ನೇ ಸಾಲಿನ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಿರುಗುಪ್ಪ ತಾಲೂಕಿನ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ಆಸಕ್ತ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
ಮೆಟ್ರಿಕ್ ಪೂರ್ವ ನಿಲಯಗಳು (ಒಟ್ಟು 06): ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ (ನಂ.1 ಸಿರುಗುಪ್ಪ, ನಂ.2 ಸಿರುಗುಪ್ಪ, ತೆಕ್ಕಲಕೋಟೆ, ಶಿರಿಗೇರಿ ಮತ್ತು ರಾರಾವಿ) ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯ (ಸಿರುಗುಪ್ಪ).
ಮೆಟ್ರಿಕ್ ನಂತರದ ನಿಲಯಗಳು (ಒಟ್ಟು 03): ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ (ನಂ.1 ಸಿರುಗುಪ್ಪ, ನಂ.2 ಸಿರುಗುಪ್ಪ) ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯ (ಸಿರುಗುಪ್ಪ).
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ (5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ) ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ (ಕಾಲೇಜು ವಿದ್ಯಾರ್ಥಿಗಳಿಗೆ) ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ.
ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ (https://swdhmis.karnataka.gov.in/#/login) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಅದರ ಸ್ವೀಕೃತಿ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಿರುಗುಪ್ಪದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಸಂಬAಧಪಟ್ಟ ನಿಲಯಪಾಲಕರಿಗೆ (ವಾರ್ಡನ್) ಸಲ್ಲಿಸಬಹುದಾಗಿದೆ.
*ಅಗತ್ಯವಿರುವ ದಾಖಲೆಗಳು:*
ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಹಿಂದಿನ ತರಗತಿಯ ಅಂಕಪಟ್ಟಿ, 03 ಇತ್ತೀಚಿನ ಭಾವಚಿತ್ರಗಳು, ಹಾಗೂ ಇತರೆ ಪೂರಕ ದಾಖಲಾತಿಗಳು.
ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಾಯಕ ನಿರ್ದೇಶಕರ ಕಛೇರಿ ಅಥವಾ ಸಂಬAಧಪಟ್ಟ ವಿದ್ಯಾರ್ಥಿನಿಲಯದ ನಿಲಯಪಾಲಕರನ್ನು (ವಾರ್ಡನ್) ಹಾಗೂ ಕಚೇರಿ ಮೊ.9480843078 ಗೆ ಸಂಪರ್ಕಿಸಬಹುದಾಗಿದೆ ಎಂದು ಸಿರುಗುಪ್ಪದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ